ಮಾಹಿತಿ - ತಂತ್ರಜ್ಞಾನ

ಪಾಕಿಸ್ತಾನವನ್ನು ಬಗ್ಗು ಬಡಿದು 93,000 ಯುದ್ಧ ಕೈದಿಗಳನ್ನು ವಶಕ್ಕೆ ಪಡೆದ ಫೀಲ್ಡ್‌ ಮಾರ್ಷಲ್‌ ಮಾಣಿಕ್ ಷಾ

1971ರ ಡಿಸೆಂಬರ್ ವೇಳೆಯಲ್ಲಿ ಸೈನ್ಯದ ಮುಖ್ಯಸ್ಥ ಮಾಣಿಕ್ ಷಾ ಅವರಿಗೆ ಪ್ರಧಾನಿ ಇಂದಿರಾ ಗಾಂಧಿಯಿಂದ ಬುಲಾವ್ ಹೇಳಿ ಕಳುಹಿಸಿದರು, ಅವರು ಬಂದೊಡನೆ ಆಕೆ ಕೇಳಿದ ಮೊದಲ ಪ್ರಶ್ನೆ: ‘ಈಗ ಯುದ್ಧ ಮಾಡಲು ಸೈನ್ಯ ಸಿದ್ಧವೇ?’ ಗುಂಡಿನಂತೆ ಬಂದ ಉತ್ತರ: “I am always ready, sweetie.” ಅವರು ಇಂದಿರಾ ಅವರನ್ನು ಮೇಡಂ ಎಂದು ಕರೆಯಲು ಒಪ್ಪುತ್ತರಲಿಲ್ಲ. ಹೀಗೆ ನೇರ ನಡೆಯ ಮುಕ್ತ ಮಾತಿನ ವ್ಯಕ್ತಿ ಮಾಣಿಕ್ ಷಾ. ಈ ಸಂಭಾಷಣೆಗೆ ಒಂದು ಕಿರು ಹಿನ್ನೆಲೆ ಇದೆ. ಬಾಂಗ್ಲಾ ದೇಶವು ಪಾಕಿಸ್ತಾನದಿಂದ ಬೇರ್ಪಟ್ಟು ಸ್ವತಂತ್ರ ದೇಶವಾಗಬೇಕು ಎಂದು ಪೂರ್ವ ಪಾಕಿಸ್ತಾನ ಪಶ್ಚಿಮ ಪಾಕಿಸ್ತಾನದ ವಿರುದ್ಧ ಒಂಬತ್ತು ತಿಂಗಳು ಯುದ್ಧ ಮಾಡಿತು, ಇದಕ್ಕೆ ‘ಮುಕ್ತಿಯುದ್ಧ’ ಎಂಬ ಹೆಸರು ಬಂತು.

ಈ ಯುದ್ಧ 1971ರ ಮಾರ್ಚ್‌ನಲ್ಲಿ ಮುಜಬುರ್ ರೆಹಮಾನ್ ನೇತೃತ್ವದಲ್ಲಿ ಆರಂಭವಾಗಿ ಒಂಬತ್ತು ತಿಂಗಳು ನಡೆಯಿತು. ಬಂಗಾಳದ ನಾಗರಿಕರು, ವಿದ್ಯಾರ್ಥಿಗಳು, ಸೈನಿಕರು ಸೇರಿ ನಡೆಸಿದ ಈ ಹೋರಾಟವನ್ನು ಪಾಕಿಸ್ತಾನದ ಸೈನ್ಯ ದಮನ ಮಾಡಲು ಕ್ರೂರವಾಗಿ ವರ್ತಿಸಿತು. ಅಸಂಖ್ಯ ಮಹಿಳೆಯರ ಮೇಲೆ ಪಾಕಿಸ್ತಾನ ಮತ್ತು ಮತೀಯ ಕೋಮುವಾದಿಗಳು ಅತ್ಯಚಾರವೆಸಗಿದರು. ಆಗ ಬಾಂಗ್ಲಾಪರ ನಾಗರಿಕರಿಗೆ ಭಾರತ, ಆರ್ಥಿಕ, ರಾಜತಾಂತ್ರಿಕ,ಸೈನಿಕ ಬೆಂಬಲ ನೀಡಿತು.ಭಾರತಕ್ಕೆ ಮನೆ ಮಠ ಕಳೆದುಕೊಂಡ ಲಕ್ಷಾಂತರ ನಿರಾಶ್ರಿತರು ಹರಿದು ಬಂದರು. ಈ ಸಮಯದಲ್ಲಿ ಭಾರತ ಸರ್ಕಾರಕ್ಕೆ ಪಾಕಿಸ್ತಾನದ ಮೇಲೆ ಯುದ್ಧ ಘೋಷಿಸುವುದು ಅನಿವಾರ್ಯವಾಗಿತ್ತು. ಇದು ಮಾಣಿಕ ಷಾ ಎದುರಿಗಿದ್ದ ಸವಾಲು, ವಸ್ತು ಸ್ಥಿತಿ. ಏಪ್ರಿಲ್‌ 1971ರಲ್ಲಿ ಪೂರ್ವ ಪಾಕಿಸ್ತಾನದಿಂದ ಲಕ್ಷಾಂತರ ನಿರಾಶ್ರಿತರು ಗಡಿ ದಾಟಿ ಭಾರತಕ್ಕೆ ಬಂದಿದ್ದರು. ಪ್ರಧಾನಿ ಇಂದಿರಾ ಆಗಲೆ ಪಾಕಿಸ್ತಾನದ ಮೇಲೆ ಯುದ್ಧ ಹೂಡಲು ಕಾತುರರಾಗಿದ್ದರು. ಆಗ ಕ್ಯಾಬಿನೆಟ್ ಸಭೆ ನಡೆದಾಗ ಇಂದಿರಾ ಇದೇ ಮಾತನ್ನು ಮುಂದಿಟ್ಟರು.

ಅದನ್ನು ಯಾವುದೇ ಮುಲಾಜಿಲ್ಲದೇ ವಿರೋಧಿಸಿದವರು ಮಾಣಿಕ್‌ ಷಾ. ಮಳೆಗಾಲದಲ್ಲಿ ಯುದ್ಧ ಹೂಡಬೇಕಾಗಿರುವ ಪಶ್ಚಿಮ ಪಾಕಿಸ್ತಾನದಲ್ಲಿ ಪ್ರವಾಹ ಹೆಚ್ಚಿರುತ್ತದೆ, ಅಲ್ಲದೆ ಸೈನ್ಯದ ಎರಡು ಕಾಲಾಳು ಪಡೆಗಳು ಬೇರೆ ಕಡೆ ಕಾರ್ಯ ನಿರತವಾಗಿದ್ದವು. ಸೈನ್ಯದ 189 ಟ್ಯಾಂಕ್‌ಗಳ ಪೈಕಿ 11 ಮಾತ್ರ ಯುದ್ಧಕ್ಕೆ ಸಿದ್ಧವಿದ್ದವು. ಮಾಣಿಕ್ ಈ ವಾಸ್ತವಗಳನ್ನು ಪ್ರಧಾನಿಗೆ ವಿವರಿಸಿ, ಹಾಗೆಂದು ಯುದ್ಧ ಬೇಡವೆಂದಲ್ಲ, ಕಾದು ಅದೇ ವರ್ಷದ ಕೊನೆಗೆ ಯುದ್ಧ ಮಾಡಲು ಪ್ರಧಾನಿ ಆದೇಶ ನೀಡಿದರೆ ಭಾರತಕ್ಕೆ ಗೆಲುವು ಖಂಡಿತ ಎಂದು ಭರವಸೆ ನೀಡಿದರು. ಇನ್ನು ಯುದ್ಧ ಶುರುವಾಗಲು ಆರೆಂಟು ತಿಂಗಳಿರುವಾಗಲೇ ಭವಿಷ್ಯದ ಫಲಿತಾಂಶ ಭಾರತದ ಪರವಿರುತ್ತದೆ ಎಂದು ನುಡಿದು, ಅಂತೆಯೇ ಅದನ್ನು ಸಾಧಿಸಿ ತೋರಿಸಿದ ವೀರ ನಾಯಕ ಮಾಣಿಕ್ ಷಾ. ಈ ಸಂದರ್ಭದಲ್ಲಿ ಮಾತಿನ ಚಕಮಕಿಯಲ್ಲಿ ಷಾ ಹೇಳಿದ ಒಂದು ಮಾತು: ‘ಸೇವೆಯಿಂದ ವಜಾ ಆಗುವುದು ಮತ್ತು ಫೀಲ್ಡ್‌ ಮಾರ್ಷಲ್‌ ಎನಿಸಿಕೊಳ್ಳುವುದರ ನಡುವೆ ಗೆರೆ ಬಲು ತೆಳು’. ಮಾಣಿಕ್ ಷಾ ನಡೆಸಿದ ಮಿಂಚಿನ ದಾಳಿಗೆ ಢಾಕಾ ವಶವಾಗಿ, ಪಾಕಿಸ್ತಾನದ 93,000 ಸೈನಿಕರು ಯುದ್ಧ ಕೈದಿಗಳಾಗಿ ವಶವಾದರು.

Loading...

ಅಮೆರಿಕಾ ಮತ್ತು ವಿಶ್ವಸಂಸ್ಥೆಯ ತೀವ್ರ ಮಧ್ಯಪ್ರವೇಶದಿಂದಷ್ಟೆ ಭಾರತ ಕದನ ವಿರಾಮ ಘೋಷಿಸಿತು. ನೂತನ ಬಾಂಗ್ಲಾ ದೇಶದ ರಾಜಧಾನಿ ಢಾಕಾಗೆ ಹೋಗಿ ಪಾಕ್ ಸೈನಿಕರ ಶರಣಾಗತಿಯನ್ನು ಸ್ವೀಕರಿಸಲು ಮಾಣಿಕ್ ಷಾಗೆ ಭಾರತದ ಸರ್ಕಾರ ಸೂಚಿಸಿತು. ಆದರೆ ಈ ಗೌರವ ಪೂರ್ವ ವಲಯದ ಸೇನಾ ಮುಖ್ಯಸ್ಥರಿಗೆ ಸಲ್ಲಬೇಕು ಎಂದು ನಿರಾಕರಿಸಿದ ಪ್ರಾಮಾಣಿಕ ಮಾಣಿಕ ಷಾ. 1971ರಲ್ಲಿ ಪಶ್ಚಿಮ ಪಾಕಿಸ್ತಾನದ ಮುಕ್ತಿ, ಭಾರತ –ಪಾಕ್‌ ಸಮರ ಮತ್ತು ಬಾಂಗ್ಲಾ ಉದಯ ಈ ಮೂರು ಮುಖ್ಯ ಘಟನೆಗಳ ಹಿಂದೆ ಮಾಣಿಕ್‌ ಷಾ ಅವರ ಪ್ರಚಂಡ ಚಾಣಕ್ಯ ತಲೆ ಕೆಲಸ ಮಾಡಿತ್ತು. ಈ ಯುದ್ಧವನ್ನು ಪ್ರಪಂಚದ ಅತಿ ಕ್ಷಿಪ್ರ ಸಮರ ಎಂದು ಪರಿಣತರು ಪರಿಗಣಿಸಿದ್ದಾರೆ. ಈ ಗೆಲುವಿನಿಂದ ಇಂದಿರಾ ಗಾಂಧಿ ವರ್ಚಸ್ಸು ಹೆಚ್ಚಿತ್ತು.
via:thirdeyemoment.blog

  • 5.5K
    Shares

ಕಮೆಂಟ್ ಮಾಡಿ

ಟ್ರೆಂಡಿಂಗ್ ಸುದ್ದಿಗಳು

ಫೇಸ್ಬುಕ್ ಪುಟ ಲೈಕ್ ಮಾಡಿ

ಜಾಹೀರಾತುಗಳು

Loading...