ನಮ್ಮ ಕರ್ನಾಟಕ ಸುದ್ದಿ

ಹಿಂದುಳಿದ ವರ್ಗದಗಳಿಗೆ ಧ್ವನಿಯಾದ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗಬೇಕು :ಕನಕಗುರು ಪೀಠದ ಈಶ್ವರಾನಂದಪುರಿ ಸ್ವಾಮೀಜಿ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಡಿ.ದೇವರಾಜು ಅರಸ್ ಬಳಿಕ ನಿರ್ಲಕ್ಷಿತ ಹಿಂದುಳಿದ ವರ್ಗದಗಳಿಗೆ ಧ್ವನಿಯಾದ ಸಿದ್ದರಾಮಯ್ಯ ಹಸುವಿನಂತೆ ಪರೋಪಕಾರಿ.ಮತ್ತೊಮ್ಮೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಬೇಕು ಎಂದು ಕಾಗಿನೆಲೆ ಕನಕಗುರು ಪೀಠದ ಈಶ್ವರಾನಂದಪುರಿ ಸ್ವಾಮೀಜಿ ತಿಳಿಸಿದ್ದಾರೆ.ನೈಸ್ ರಸ್ತೆಯ ಬಳಿಯ ಜೆಟ್ಟಿಗರಹಳ್ಳಿಯಲ್ಲಿ ಕನಕ ಸಮುದಾಯದ ಭವನ ಉದ್ಘಾಟಿಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಕೊಟ್ಟ ಯೋಜನೆಗಳು ಇನ್ನೂ ಪೂರ್ಣಗೊಂಡಿಲ್ಲ. ಅವರು ಘೋಷಿಸಿದ ಅನುದಾನ ಇದುವರೆಗೂ ಬಿಡುಗಡೆ ಆಗಿಲ್ಲ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ನಿರ್ದೇಶನ ನೀಡಿ ಅನುದಾನ ಬಿಡುಗಡೆಗೆ ಶ್ರಮಿಸಿ ಎಂದು ಸಲಹೆ ಮಾಡಿದ್ದಾರೆ.

ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಬಿಡಿಎ ಅಧ್ಯಕ್ಷ ಎಸ್.ಟಿ.ಸೋಮಶೇಖರ್, ಎಲ್ಲ ಜಾತಿ ಸಮುದಾಯದವರಿಗೆ ಸಿದ್ದರಾಮಯ್ಯ ಅವರು ರಾಜಕೀಯವಾಗಿ ಬೆಳೆಯಲು ಅವಕಾಶ ನೀಡಿದರು.ಕೆಲವರು ಮಗನಿಗೆ, ಸೊಸೆಗೆ ಮಾತ್ರ ರಾಜಕೀಯ ಅವಕಾಶ ಕೊಡುತ್ತಾರೆ. ಅವರೇ ಮುಖ್ಯಮಂತ್ರಿಯಾಗಿ ಇನ್ನೂ ೫ ವರ್ಷ ಅಧಿಕಾರದಲ್ಲಿದ್ದರೆ ಬೆಂಗಳೂರು ಇನ್ನಷ್ಟು ಅಭಿವೃದ್ಧಿ ಆಗುತ್ತಿತ್ತು.ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದು ೭ ತಿಂಗಳು ಕಳೆದಿದೆ. ಆದರೂ ಬೆಂಗಳೂರಿನ ರಸ್ತೆಗಳು ಸುಧಾರಣೆ ಆಗುತ್ತಿಲ್ಲ ಎಂದು ಪರೋಕ್ಷವಾಗಿ ಮೈತ್ರಿ ಸರ್ಕಾರದ ವಿರುದ್ದ , ಉಪ ಮುಖ್ಯಮಂತ್ರಿ ಡಾ.ಪರಮೇಶ್ವರ್ ವಿರುದ್ದ ಅಸಮಾಧಾನ ವ್ಯೆಕ್ತಪಡಿಸಿದರು.

ಕಮೆಂಟ್ ಮಾಡಿ

ಟ್ರೆಂಡಿಂಗ್ ಸುದ್ದಿಗಳು

ಫೇಸ್ಬುಕ್ ಪುಟ ಲೈಕ್ ಮಾಡಿ

ಜಾಹೀರಾತುಗಳು

Loading...