ನಮ್ಮ ಕರಾವಳಿ ಸುದ್ದಿ

ಜಾಮಿಯಾ ಮಸೀದಿಗೆ ಹಂದಿ ಮಾಂಸ ಎಸೆದ ಐವರ ಬಂಧನ

ಉಡುಪಿ ಜಿಲ್ಲೆಯ ಕಿರಿಮಂಜೇಶ್ವರ ಸಮೀಪದ ನಾಗೂರು ಜಾಮಿಯಾ ಮಸೀದಿ ಆವರಣದಲ್ಲಿ ಕೆಲ ದಿನಗಳ ಹಿಂದೆ ಹಂದಿ ಮಾಂಸ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ .ಬಂಧಿತ ಆರೋಪಿಗಳನ್ನು ಉಪ್ಪುಂದ ರವಿಚಂದ್ರ ಈತನ ತಂದೆ ನಾಗರಾಜ್ ತೊಂಡೆ ಮಕ್ಕಿಯ ನವೀನ್ ಖಾರ್ವಿ, ಶ್ರೀಧರ ಖಾರ್ವಿ ಹಾಗೂ ರಾಘವೇಂದ್ರ ಖಾರ್ವಿ ಎಂದು ಗುರುತಿಸಲಾಗಿದೆ.ಜ.14ರಂದು ರಾತ್ರಿ 10.55ರ ಸುಮಾರಿಗೆ ಬೈಕ್‌ನಲ್ಲಿ ಆಗಮಿಸಿ ಮಸೀದಿಯ ಆವರಣಕ್ಕೆ ಹಂದಿ ಮಾಂಸ ಎಸೆದು ಪರಾರಿಯಾಗಿದ್ದರು. ಜ.15ರಂದು ಬೆಳಗ್ಗೆ 5.30ರ ಸುಮಾರಿಗೆ ಪ್ರಕರಣ ಬೆಳಕಿಗೆ ಬಂದಿತ್ತು. ಮಸೀದಿಗೆ ಅಳವಡಿಸಿದ ಸಿಸಿ ಟಿವಿ ಕ್ಯಾಮರಾದಲ್ಲಿ ದೃಶ್ಯ ಸೆರೆಯಾಗಿತ್ತು. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳ ಪತ್ತೆಗಾಗಿ ಉಡುಪಿ ಜಿಲ್ಲಾ ಎಸ್ಪಿ ಲಕ್ಷ್ಮಣ ನಿಂಬರ್ಗಿ, ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಕುಮಾರಚಂದ್ರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು.

  • 10
    Shares

ಕಮೆಂಟ್ ಮಾಡಿ

ಟ್ರೆಂಡಿಂಗ್ ಸುದ್ದಿಗಳು

ಫೇಸ್ಬುಕ್ ಪುಟ ಲೈಕ್ ಮಾಡಿ

ಜಾಹೀರಾತುಗಳು

Loading...