ನಮ್ಮ ಕರಾವಳಿ ಸುದ್ದಿ

ಮುಂಬರುವ ಲೋಕಸಭಾ ಟಿಕೆಟ್ ನನಗೆಯೇ ಎಂದು ಸುಳಿವು ನೀಡಿದ ನಳಿನ್ ಕುಮಾರ್ ಕಟೀಲ್

ಮಂಗಳೂರು : ದಕ್ಷಿಣ ಕನ್ನಡ ಕಮಲ ಪಾಳಯದಲ್ಲಿ ಲೋಕಸಭಾ ಚುನಾವಣಾ ಟಿಕೆಟ್ ಲೆಕ್ಕಾಚಾರ ಸಂಬಂಧಿಸಿದಂತೆ ಪಕ್ಷದೊಳಗೆ ಭಾರಿ ಪೈಪೋಟಿ ಜಾರಿಯಲ್ಲಿದೆ. ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ತಮಗೆ ಟಿಕೆಟ್ ಖಚಿತಗೊಂಡಿದೆ ಎಂಬ ಸುಳಿವೊಂದನ್ನು ನೀಡಿದ್ದಾರೆ.ನಗರದ ಪಂಪ್ವೆಲ್ ಹಾಗೂ ತೊಕ್ಕೊಟ್ಟು ಫ್ಲೈಓವರ್ ವಿಳಂಬ ವಿಚಾರವಾಗಿ ವಿರೋಧ ಪಕ್ಷಗಳು ನಳೀನ್ ಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣ ಸೇರಿ ವಿವಿಧ ಕಡೆ ನಳಿನ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದವು. ಈ ಕುರಿತಾಗಿ ಪ್ರತಿಕ್ರಿಯೆ ನೀಡಿದ ಸಂಸದ ನಳೀನ್ ಕುಮಾರ್ ಕಟೀಲ್ ಅವರು ಪರಿಷತ್ ಸದಸ್ಯ ಐವನ್ ಡಿಸೋಜ ಅವರಿಗೆ ನೀಡಿದ ಪ್ರತಿಕ್ರಿಯೆಯಲ್ಲಿ ನಾನು ಬಕೆಟ್ ಹಿಡಿದು ಹಿಂಬಾಗಿಲ ಮೂಲಕ ಅಧಿಕಾರ ಹಿಡಿದವರೆಲ್ಲ ತಾಕತ್ತಿದ್ದರೆ ಮುಂದಿನ ಚುನಾವಣೆಯಲ್ಲಿ ನನ್ನನ್ನು ಎದುರಿಸಿ ಎಂಬ ಪ್ರತಿಕ್ರಿಯೆ ನೀಡುವ ಮೂಲಕ ಮುಂದಿನ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ನನಗೆ ಖಚಿತ ಎಂಬ ಮಾಹಿತಿಯನ್ನು ಹೊರಹಾಕಿದ್ದಾರೆ.

ಪಂಪ್ವೆಲ್ ವಿಚಾರದಿಂದ ಹಿಡಿದು ಇತರ ವಿಷಯಗಳಲ್ಲಿ ವಿರೋಧ ಪಕ್ಷದವರಿಗಿಂತ ಸ್ವಪಕ್ಷೀಯರೇ ಹೆಚ್ಚಾಗಿ ನಳಿನ್ ಕುಮಾರ್ ಕಟೀಲ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತಿರುವುದು ಸಂಸದರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

Loading...

  • 12
    Shares

ಕಮೆಂಟ್ ಮಾಡಿ

ಟ್ರೆಂಡಿಂಗ್ ಸುದ್ದಿಗಳು

ಫೇಸ್ಬುಕ್ ಪುಟ ಲೈಕ್ ಮಾಡಿ

ಜಾಹೀರಾತುಗಳು

Loading...