ನಮ್ಮ ಕರ್ನಾಟಕ ಸುದ್ದಿ

ಮಾಧ್ಯಮಗಳು ಉಗ್ರಗಾಮಿಗಳಿಗಿಂತ ಅಪಾಯಕಾರಿ :ಪ್ರಿಯಾಂಕ ಖರ್ಗೆ

ಬೆಂಗಳೂರು :ಮಾಧ್ಯಮಗಳು ಉಗ್ರಗಾಮಿಗಳಿಗಿಂತ ಅಪಾಯಕಾರಿ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ ಖರ್ಗೆ ಅವರಿಂದು ಮಾಧ್ಯಮಗಳ ವಿರುದ್ಧ ಕಿಡಿಕಾರಿದ್ದಾರೆ.ಅಂಬೇಡ್ಕರ್ ನಿಗಮದ ವತಿಯಿಂದ ವಿಕಾಸಸೌಧದಲ್ಲಿ ಏರ್ಪಡಿಸಿದ್ದ ಟೆಲಿವಿಷನ್, ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಉಗ್ರಗಾಮಿಗಳು ಒಂದೇ ಗುಂಡಿಗೆ ಸಾಯಿಸುತ್ತಾರೆ. ಆದರೆ, ಮಾಧ್ಯಮಗಳು ನಿತ್ಯ ಕಾಟ ಕೊಟ್ಟು ಸಾಯಿಸುತ್ತವೆ ಎಂದು ಹೇಳಿದ್ದಾರೆ.

ಸತ್ಯದ ಸುದ್ದಿಗಿಂತ ಅರ್ಧ ಸತ್ಯ ತಿಳಿದು ಇಂದಿನ ಕೆಲ ಮಾಧ್ಯಮಗಳು ಸುದ್ದಿ ಮಾಡುತ್ತವೆ. ಟಿಆರ್‌ಪಿ ಗಾಗಿ ಸತ್ಯವಲ್ಲದ ಸುದ್ದಿಗಳನ್ನು ಪ್ರಸಾರ ಮಾಡುತ್ತವೆ ಎಂದು ಅವರು ಟೀಕಿಸಿದ್ದಾರೆ.ಪ್ರಾಮಾಣಿಕವಾಗಿ ಸತ್ಯದ ಸುದ್ದಿಯನ್ನು ಮಾಧ್ಯಮಗಳು ಬಿತ್ತರಿಸಬೇಕು, ಇದರ ಬದಲಿಗೆ ಸತ್ಯವಲ್ಲದ ಸುದ್ದಿಗಳನ್ನು ವರದಿ ಮಾಡುವುದು ಸರಿಯಲ್ಲ ಎಂದು ಅವರು ಹೇಳಿದ್ದಾರೆ.ಪಿತಾ ಪತ್ರಿಕೋದ್ಯಮ ಇವತ್ತು ಜಾಸ್ತಿಯಾಗ್ತಿದೆ. ಇದರಿಂದ ಸಮಾಜಕ್ಕೆ ತಪ್ಪು ಸುದ್ದಿ ಹೋಗುತ್ತದೆ. ಇತ್ತೀಚೆಗೆ ತಮಗೂ ಇದರ ಅನುಭವ ಆಗಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.ದೃಶ್ಯ ಮಾಧ್ಯಮಗಳು ಬ್ರೇಕಿಂಗ್ ನ್ಯೂಸ್ ಕೊಡುವ ಭರದಲ್ಲಿ ಅವರಿಗೆ ಬೇಕಾದ ಸುದ್ದಿಯನ್ನು ಪ್ರಸಾರ ಮಾಡುತ್ತವೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

  • 36
    Shares

ಕಮೆಂಟ್ ಮಾಡಿ

ಟ್ರೆಂಡಿಂಗ್ ಸುದ್ದಿಗಳು

ಫೇಸ್ಬುಕ್ ಪುಟ ಲೈಕ್ ಮಾಡಿ

ಜಾಹೀರಾತುಗಳು

Loading...