ನಮ್ಮ ಕರ್ನಾಟಕ ಸುದ್ದಿ

ಗಣೇಶ್ ವಿರುದ್ಧ ಕೇಸ್ ವಾಪಸ್ಸು ಪಡೆಯಲು ಆನಂದ್ ಸಿಂಗ್ ಮೇಲೆ ಒತ್ತಡ !!

ಬೆಂಗಳೂರು : ಈಗಲ್ರೆಟನ್ಸಾ ರೆಸಾರ್ಟ್ ನಲ್ಲಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಗಣೇಶ್‌ರವರಿಗೆ ಪೊಲೀಸರು ಹುಡುಕಾಟ ನಡೆಸಿರುವಾಗಲೇ ಅವರ ಮೇಲಿನ ಕೇಸ್ ವಾಪಸ್ ಪಡೆಯಬೇಕು.ಅವರನ್ನು ಪಕ್ಷದಿಂದ ಅಮಾನತು ಮಾಡಿರುವುದನ್ನು ವಾಪಸ್ ಪಡೆಯುವಂತೆ ಶಾಸಕ ಗಣೇಶ್ ಅವರ ಬೆಂಬಲಿಗರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ ಮಾಡಿದ್ದಾರೆ.ಬಳ್ಳಾರಿಯ ಕಂಪ್ಲಿಯಿಂದ ಬಂದಿದ್ದ ಶಾಸಕರ ಬೆಂಬಲಿಗರು ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಅವರ ಮೇಲಿನ ಮೊಕದ್ದಮೆಯನ್ನು ವಾಪಸ್ ಪಡೆಯಬೇಕು ಹಾಗೂ ಪಕ್ಷದಿಂದ ಅಮಾನತನ್ನೂ ವಾಪಸ್ ಪಡೆಯುವಂತೆ ಮನವಿ ಮಾಡಿದರು.ಅಲ್ಲದೆ ಕೇಸ್ ವಾಪಸ್ಸು ಪಡೆಯಲು ಗಣೇಶ್ ಅವರ ಆಪ್ತರು ನಿರಂತರ ಆನಂದ್ ಸಿಂಗ್ ಕುಟುಂಬದವರ ಜೊತೆ ಸಂಪರ್ಕದಲ್ಲಿದ್ದು ಮನಒಲಿಸುವ ಕೆಲಸದಲ್ಲಿ ತೊಡಗಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಭೇಟಿ ಮಾಡಿ ಮಾತನಾಡಿದ ನಂತರ ಕಂಪ್ಲಿ ಕ್ಷೇತ್ರದ ಯುವ ಕಾಂಗ್ರೆಸ್ ಮುಖಂಡ ಜಗದೀಶ್ ಅವರು ಆನಂದ್ ಸಿಂಗ್ ಮತ್ತು ಗಣೇಶ್ ಅವರು 20 ವರ್ಷದಿಂದ ಸ್ನೇಹಿತರು. ಇಬ್ಬರು ಅಣ್ಣ-ತಮ್ಮಂದಿರಂತ್ದಿದ್ದರು. ಈಗ ಏಕೆ ಹೊಡೆದಾಡಿಕೊಂಡಿದ್ದಾರೋ ಗೊತ್ತಿಲ್ಲ. ನಾವೆಲ್ಲ ಕಂಪ್ಲಿ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು.ಗಣೇಶ್ ಅವರನ್ನು ಪಕ್ಷದಿಂದ ಅಮಾನತು ಮಾಡಿರುವುದು ಆತಂಕ ತಂದಿದೆ. ಚುನಾವಣೆಗೆ ಹೇಗೆ ಕೆಲಸ ಮಾಡಬೇಕು ಗೊತ್ತಾಗುತ್ತಿಲ್ಲ. ಗಣೇಶ್ ಅವರು ಆನಂದ್ ಸಿಂಗ್ ಅವರ ಕ್ಷಮೆ ಕೇಳುತ್ತಾರೆ. ನಾವೂ ಸಹ ಆನಂದ್ ಸಿಂಗ್ ಅವರಲ್ಲಿ ಕ್ಷಮೆ ಯಾಚಿಸುತ್ತೇವೆ. ಇಬ್ಬರು ಮತ್ತೆ ಒಟ್ಟಾಗಿ ಹೋಗಬೇಕು ಎನ್ನುವುದು ಕಾರ್ಯಕರ್ತರ ಆಶಯ ಎಂದರು.ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎಲ್ಲವನ್ನೂ ಹೇಳಿದ್ದೇವೆ, ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ ಎಂದರು.

  • 33
    Shares

ಕಮೆಂಟ್ ಮಾಡಿ

ಟ್ರೆಂಡಿಂಗ್ ಸುದ್ದಿಗಳು

ಫೇಸ್ಬುಕ್ ಪುಟ ಲೈಕ್ ಮಾಡಿ

ಜಾಹೀರಾತುಗಳು

Loading...